7
ಲಾರಿ ಹರಿದು ಬಾಲಕಿಯೋರ್ವಳು ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ಉಡುಪಿಯ ಅಂಬಾಗಿಲು ಬಳಿ ನಡೆದಿದೆ.
ಮೃತ ಬಾಲಕಿಯನ್ನು ಪ್ರಣಮ್ಯ(8) ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದ ಲಾರಿ ಸಿಮೆಂಟ್ ಮಿಕ್ಸಿಂಗ್ ಲಾರಿ ಎಂದು ತಿಳಿದುಬಂದಿದೆ.
ಪ್ರಣಮ್ಯ ಹಾಗೂ ತಾಯಿ ಸ್ಕೂಟರ್ ನಲ್ಲಿ ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಾಯಿ ಹಾಗೂ ಮಗಳು ಇಬ್ಬರೂ ರಸ್ತೆಗೆ ಬಿದ್ದಿದ್ದರು.
ಆದರೆ ಬಾಲಕಿ ಪ್ರಣಮ್ಯ ಮೇಲೆ ಲಾರಿ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಸಾವು ಬದುಕಿನ ನಡುವೆ ಹೋರಾಡಿದ ಪ್ರಣಮ್ಯ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತ ಬಾಲಕಿಯ ತಾಯಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
