Home » Karkala: ಮಗು ಇದ್ದು ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

Karkala: ಮಗು ಇದ್ದು ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ

585 comments

Karkala: ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ವಿಭಿನ್ನ ಪ್ರಕರಣವೊಂದು ಈದು ಗ್ರಾಮದಲ್ಲಿ ನಡೆದಿದೆ. ಈಕೆ ಕಷ್ಟಪಟ್ಟು ಓದಿ ಮದುವೆಯಾಗಿ, ಮಗು ಇದ್ದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡುವ ನಿರ್ಧಾರಕ್ಕೆ ಬಂದಿರುತ್ತಾರೆ.

ಮೂಡುಬಿದಿರೆಯ ನಿವಾಸಿ ಪ್ರಸನ್ನಾ ಕಾರ್ಕಳ (Karkala) ತಾಲೂಕು ಈದು ಗ್ರಾಮದ ರಾಜೇಶ್ ಎಂಬವರೊಂದಿಗೆ 2022ರಲ್ಲಿ ಮದುವೆ ಆಗಿದ್ದರು. ಇನ್ನು ರಾಜೇಶ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತ ಪ್ರಸನ್ನಾ ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಬ್ಬರ ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ ಇವರಿಗೆ ಮದುವೆಯಾಗಿ 10 ತಿಂಗಳ ಹೆಣ್ಣು ಮಗು ಇತ್ತು.

ಆದ್ರೆ ಪ್ರಸನ್ನ,ಈಕೆ ತನ್ನ ತಾಯಿ ಮನೆಗೆ ಫೋನಾಯಿಸಿ ಗಂಡನ ಮನೆಯವರು ಚೆನ್ನಾಗಿ ನೋಡುತ್ತಿದ್ದಾರೆಂದು ಹೇಳುತ್ತಿದ್ದಳು. ಆದರೆ ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು ನಾನು ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಇದೇ ಕೊರಗಿನಿಂದ ಖಿನ್ನತೆಗೆ ಒಳಗಾಗಿದ್ದಳು. ಈ ಬಗ್ಗೆ ಪ್ರಸನ್ನಾರವರನ್ನು ಉಡುಪಿಯ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಈ ಖಿನ್ನತೆಗೆ ಒಳಗಾಗಿ ನ. 6ರಂದು ಗಂಡನ ಮನೆಯ ಡೈನಿಂಗ್ ಹಾಲ್ ನಿಂದ ಮಹಡಿಗೆ ಹೋಗುವ ಮೆಟ್ಟಿಲಿನ ಸ್ಟೀಲ್ ರಾಡಿಗೆ ಚೂಡಿದಾರ ಶಾಲ್ ನಿಂದ ಕುತ್ತಿಗೆಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

You may also like

Leave a Comment