Home » Udupi: ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು !!

Udupi: ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಯುವತಿ ನೇಣಿಗೆ ಶರಣು !!

1 comment

Udupi : ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ನ.17ರಂದು ಮೃತಪಟ್ಟಿದ್ದಾರೆ.

ಉಡುಪಿ(Udupi) ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ(Keertana Shetty)ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮನೆಯ ಕೋಣೆಯಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಕೀರ್ತನಾ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಕುಟುಂಬಸ್ಥರು ರಕ್ಷಿಸಿ ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಯುವತಿ ನ. 17ರಂದು ಕೊನೆಯುಸಿರೆಳೆದಿದ್ದಾರೆ.

ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

You may also like

Leave a Comment