Home » ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಸ್ ಏಜೆಂಟ್

ಉಡುಪಿ: ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಸ್ ಏಜೆಂಟ್

0 comments

ಉಡುಪಿ: ಮನೆಯ ಬಾವಿಯಲ್ಲಿ ಜಿಗಿದು, ಹಿರಿಯ ನಾಗರಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಸೋಮವಾರ ಬನ್ನಂಜೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು‌ ಮಂಜುನಾಥ್ ಶೆಣೈ (72ವ), ಹಿರಿಯ‌ ಬಸ್ ಏಜೆಂಟ್ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ. ‌ಬೊಬ್ಬಿಡುವ ಶಬ್ದ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯರು, ಅಗ್ನಿಶಾಮಕ ದಳವನ್ನು ಕರೆಸಿಕೊಂಡರು. ಅಗ್ನಿಶಾಮಕ ದಳದವರು ಹಗ್ಗದ ಸಹಾಯದಿಂದ ಬಾವಿಯಲ್ಲಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿದರು. ತಕ್ಷಣ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ವ್ಯಕ್ತಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿ, ಪರೀಕ್ಷೆಗೆ ಒಳಪಡಿಸಿದಾಗ, ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ.

You may also like