4
ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರು ಮೂಲದ ನಾಲ್ವರು ಕಾರು ಅಪಘಾತಕ್ಕೊಳಗಾಗಿ ಓರ್ವ ಸಾವನ್ನಪ್ಪಿದ ಘಟನೆಯೊಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದಲ್ಲಿ ನಡೆದಿದೆ.
ಉತ್ತರಕನ್ನಡ ಜಿಲ್ಲೆಯಿಂದ ಪ್ರವಾಸಕ್ಕೆಂದು ಬಂದಿದ್ದ ನಾಲ್ವರು ಸ್ನೇಹಿತರು ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಕಾರು ಅಪಘಾತಕ್ಕೊಳಗಾಗಿ 23 ವರ್ಷದ ಅಕ್ಷಯ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬಾಕಿ ಉಳಿದ ತೇಜಸ್, ಪವನ್, ಹರ್ಚ ಇವರುಗಳಿಗೆ ಗಂಭೀರ ಗಾಯಗಳಾಗಿದ್ದು, ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
