Home » Kaapu : ಹಿಟ್ ಅಂಡ್ ರನ್ ಕೇಸ್ – ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಮಗನ ಅಟ್ಟಹಾಸಕ್ಕೆ ಅಮಾಯಕ ಬಲಿ !!

Kaapu : ಹಿಟ್ ಅಂಡ್ ರನ್ ಕೇಸ್ – ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಮಗನ ಅಟ್ಟಹಾಸಕ್ಕೆ ಅಮಾಯಕ ಬಲಿ !!

0 comments

Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.

ಕಾಪು(Kaapu) ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿಯಲ್ಲಿ ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ಬೆಳಪು ದೇವಿಪ್ರಸಾದ್ ಶೆಟ್ಟಿ(Deviprasad Shetty)ಅವರ ಪುತ್ರ ಪ್ರಜ್ವಲ್ ಶೆಟ್ಟಿ ನ.11ರಂದು ಮುಂಜಾನೆ 5 ಗಂಟೆಗೆ ಹಿಟ್ ಆಯಂಡ್ ರನ್ ನಡೆಸಿ ಪರಾರಿಯಾಗಿದ್ದಾನೆ. ಜೀಪ್ ಡಿಕ್ಕಿ ಹೊಡೆದ ತೀವ್ರತೆಗೆ ಮಹಮ್ಮದ್ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಬೆಳಪುವಿನ ಮುಹಮ್ಮದ್ ಹುಸೇನ್(39) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್ ಶೆಟ್ಟಿ ಹಾಗೂ ಜೀಪನ್ನು ವಶಪಡಿಸಿಕೊಂಡು ಕಾನೂನು ಕ್ರಮ ಜರಗಿಸಿರುವುದಾಗಿ ತಿಳಿದುಬಂದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದಾರೆ.

You may also like

Leave a Comment