Home » ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ | ಹಾಸ್ಟೆಲ್ ಭದ್ರತಾ ಸಿಬ್ಬಂದಿಯ ಬಂಧನ

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ | ಹಾಸ್ಟೆಲ್ ಭದ್ರತಾ ಸಿಬ್ಬಂದಿಯ ಬಂಧನ

by Praveen Chennavara
0 comments

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿ ಜಗನ್ನಾಥ್(54) ಎಂಬಾತನೇ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬಂಧನಕ್ಕೊಳಗಾದ ಆರೋಪಿ.

ಜಗನ್ನಾಥನು ಹಾಸ್ಟೆಲ್‌ನ 10ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿತ್ತು.

ಘಟಕದ ಅಧಿಕಾರಿಗಳು ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

You may also like

Leave a Comment