Home » ಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ ,ವಿದೇಶಕ್ಕೆ ಹೋಗಲು ಸಿದ್ದತೆಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಕಾರ್ಕಳ : ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ ,ವಿದೇಶಕ್ಕೆ ಹೋಗಲು ಸಿದ್ದತೆಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು

by Praveen Chennavara
0 comments

Karkala accident: ಉಡುಪಿ : ನಿಂತಿದ್ದ ಬಸ್‌ಗೆ ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳದ ಹಿರ್ಗಾನ ಚರ್ಚ್ ಬಳಿ (Karkala Accident) ಬುಧವಾರ ರಾತ್ರಿ 8ಗಂಟೆಗೆ ಸಂಭವಿಸಿದೆ.

ಮೃತಪಟ್ಟವರನ್ನು ಹಿರ್ಗಾನ ಗ್ರಾಮದ ಕಾನಂಗಿ ಬಳಿಯ ಅಂಕರಬೆಟ್ಟು ನಿವಾಸಿ
ಮನೋಹರ್ (43) ಎಂದು ಗುರುತಿಸಲಾಗಿದೆ.

ಕಾರ್ಕಳದಿಂದ ಹೋಗುತ್ತಿದ್ದ ಖಾಸಗಿ ಬಸ್ ಚಾಲಕ ಹಿರ್ಗಾನ ಚರ್ಚ್‌ ಬಳಿ ಪ್ರಯಾಣಿಕರನ್ನು ಇಳಿಸುವ ನಿಟ್ಟಿನಲ್ಲಿ ಬಸ್ ನಿಲ್ಲಿಸಿದ್ದು, ಈ ವೇಳೆ ಹಿಂಬದಿಯಿಂದ ಬಂದ ಬೈಕ್ ಬಸ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಡಿದ್ದಾರೆ.

ಮನೋಹರ್ ಅವರು ಈ ತಿಂಗಳು ಉದ್ಯೋಗ ನಿಮಿತ್ತ ವಿದೇಶ ತೆರಳಲಿದ್ದರು. ಹೀಗಾಗಿ ಫೆ.28ರಂದು ಮಂಗಳೂರಿನಲ್ಲಿ ಮೆಡಿಕಲ್ ಚೆಕ್‌ಅಪ್ ಮಾಡಿಸಿದ್ದರು. ಅದರ ರಿಪೋರ್ಟ್ ತರಲು ಬುಧವಾರ ಮಂಗಳೂರಿಗೆ ತೆರಳಿದ್ದು ಅಲ್ಲಿಂದ ವಾಪಾಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

You may also like

Leave a Comment