5
Udupi liquor ban: ರಾಜ್ಯಾದ್ಯಂತ ಗಣೇಶ ಚತುರ್ಥಿ (Ganesh chaturthi)ಹಬ್ಬದ ಸಂಭ್ರಮಾಚರಣೆ ಜೋರಾಗಿದೆ. ಕರಾವಳಿಯಾದ್ಯಂತ ಗಣೇಶ ಚತುರ್ಥಿ ಸಂಭ್ರಮಕ್ಕೆ ಭರದ ತಯಾರಿ ನಡೆಯುತ್ತಿದೆ. ಸೋಮವಾರ ಗೌರಿ ಹಬ್ಬದ ಆಚರಣೆ ನಡೆಯುತ್ತಿದ್ದು, ಮಂಗಳವಾರ ಗಣೇಶ ಹಬ್ಬದ ಆಚರಣೆ ನಡೆಯಲಿದೆ. ಈ ನಡುವೆ, ಉಡುಪಿಯಲ್ಲಿ (Udupi)ಗಣೇಶ ಚತುರ್ಥಿ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಉಡುಪಿಯಲ್ಲಿ ಮದ್ಯ ನಿಷೇಧ(Udupi liquor ban) ಮಾಡಿ ಆದೇಶ ಹೊರಡಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಸೆ. 19, ಉಡುಪಿ ನಗರದಲ್ಲಿ ಸೆ. 21 ಮತ್ತು ಸೆ. 23ರಂದು ಡ್ರೈ ಡೇ ಘೋಷಣೆ ಮಾಡಲಾಗಿದೆ. ಚೌತಿ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕೋರಿಕೆಯ ಅನುಸಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮದ್ಯ ಮಾರಾಟ (Bar Close) ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
