Home » ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಬಸ್, ಹಲವರ ಸ್ಥಿತಿ ಗಂಭೀರ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಬಸ್, ಹಲವರ ಸ್ಥಿತಿ ಗಂಭೀರ

0 comments

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಉರುಳಿ ಬಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ಲೂರಿನಲ್ಲಿ ನಡೆದಿದೆ.

ಅಪಘಾತದಲ್ಲಿ ಒಟ್ಟು 22 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಬಸ್ ನಲ್ಲಿದ್ದ 22 ಜನರ ಪೈಕಿ ಸಂಕ್ರಪ್ಪ (50), ರೂಪಾ(35), ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43) ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

You may also like

Leave a Comment