ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಸೀಮಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬೈಂದೂರು ಮೂಲದ ಈಕೆ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಮಧ್ಯಾಹ್ನ ಹಾಸ್ಟೆಲ್‌ನ ತನ್ನ ಕೊಠಡಿಯಲ್ಲಿ ಫ್ಯಾನ್‌ಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೀಮಾ ಸುಮಾರು 5 ತಿಂಗಳ ಹಿಂದೆ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿದ್ದೆ ಮಾತ್ರೆ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡು ಕಾಲೇಜಿಗೆ ಬರಲಾರಂಭಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸೀಮಾ ಗುರುವಾರ ಮಧ್ಯಾಹ್ನ ಹಾಸ್ಟೆಲ್‌ನ ಕೋಣೆಯಲ್ಲಿ ಒಬ್ಬಳೇ ಇರುವಾಗ ಫ್ಯಾನ್‌ಗೆ ಚೂಡಿದಾರದ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
