Home » ಉಡುಪಿ : ಕರ್ತವ್ಯದಲ್ಲಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು!

ಉಡುಪಿ : ಕರ್ತವ್ಯದಲ್ಲಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು!

0 comments

ಉಡುಪಿ: ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆನಂದ್ ಜಿ.(44) ಗಂಧದ್ ಮೃತ ಶಿಕ್ಷಕ.

ಇವರು ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲದ ಮತ್ತೊಂದು ಖಾಸಗಿ ಆಸ್ಪತ್ರೆಗೆ
ಸ್ಥಳಾಂತರಿಸಲಾಗಿದೆ.

ಆದರೆ ಅಲ್ಲಿ ಪರೀಕ್ಷಿಸಿದಾಗ ಮೃತಪಟ್ಟಿರುವುದಾಗಿ ವೈದ್ಯರು
ತಿಳಿಸಿದ್ದಾರೆ. ಆನಂದ್ ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

You may also like

Leave a Comment