Bengaluru: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ.
ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಅರೆಸ್ಟ್ ಆಗಿದ್ದ ಅಬ್ದುಲ್ಲ ಖಾದರ್ ಶೇಕ್ ಎಂಬಾತ ವಿಚಾರಣೆ ವೇಳೆ ಹಲವು ವಿಷಯ ಬಾಯ್ದಿಟ್ಟಿದ್ದ. ಇದರ ಅನ್ವಯ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು. ಈತನ ಮಾಹಿತಿ ಮೇರೆಗೆ ಬೆಂಗಳೂರಿನ ಮೂರು ಕಡೆ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ. ಅಂತೆಯೇ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ.
