Home » BS Yediyurappa: ಪೋಕ್ಸೋ ಕೇಸ್: ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗಲು BSY ಸೇರಿ 4 ಆರೋಪಿಗಳಿಗೆ ಸಮನ್ಸ್

BS Yediyurappa: ಪೋಕ್ಸೋ ಕೇಸ್: ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗಲು BSY ಸೇರಿ 4 ಆರೋಪಿಗಳಿಗೆ ಸಮನ್ಸ್

0 comments
BS Yediyurappa

BS Yediyurappa: ಮಾಜಿ ಸಿಎಂ ಬಿಎಸ್‌ವೈ (BS Yediyurappa) ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈ ಪ್ರಕರಣ ಸಂಬಂಧ ಹೈಕೋರ್ಟ್ ಟ್ರಯಲ್‌ಗೆ ಅನುಮತಿ ನೀಡಿತ್ತು. ಇದೀಗ 1ನೇ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದು, ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ತಿಳಿಸಿದೆ.

ಇದಕ್ಕೂ ಮುನ್ನ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿತ್ತು.

You may also like