Home » Bengaluru : ಜಯನಗರ ಆಸ್ಪತ್ರೆಯಲ್ಲಿ ಎಡವಟ್ಟು – ಪೇಷಂಟ್ ಗೆ O+ ಬದಲು A+ ರಕ್ತ ನೀಡಿದ ಲ್ಯಾಬ್ ಟೆಕ್ನಿಷಿಯನ್!!

Bengaluru : ಜಯನಗರ ಆಸ್ಪತ್ರೆಯಲ್ಲಿ ಎಡವಟ್ಟು – ಪೇಷಂಟ್ ಗೆ O+ ಬದಲು A+ ರಕ್ತ ನೀಡಿದ ಲ್ಯಾಬ್ ಟೆಕ್ನಿಷಿಯನ್!!

0 comments

Bengaluru : ಬೆಂಗಳೂರಿನ(bengaluru) ಜಯನಗರ(Jayanagar) ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತಹೀನತೆ ಚಿಕಿತ್ಸೆಗೆ ಬಂದ ರೋಗಿಗೆ ತಪ್ಪಾಗಿ ಎ ಪಾಸಿಟಿವ್ A+ ರಕ್ತ ನೀಡಲಾಗಿದ್ದು, ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಐಸಿಯು ಸೇರಿರುವ ಘಟನೆ ನಡೆದಿದೆ.

ಹೌದು, ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದರು. ವೈದ್ಯರ ಸಲಹೆಯಂತೆ ರಕ್ತ ನೀಡಲು ನಿರ್ಧರಿಸಲಾಗಿದ್ದು, ರೋಗಿಯ ರಕ್ತದ ಗುಂಪು O+ ಆಗಿದ್ದರೂ ಸಹ, ಆಸ್ಪತ್ರೆಯ ಸಿಬ್ಬಂದಿ ಮತ್ತು ಲ್ಯಾಬ್ ವಿಭಾಗದ ನಿರ್ಲಕ್ಷ್ಯದಿಂದ A+ ರಕ್ತವನ್ನು ಹಾಕಲಾಗಿದೆ. ಇದೀಗ ಬದಲು ರಕ್ತವನ್ನು ಕೊಟ್ಟು ಎಡವಟ್ಟು ಮಾಡಿದ ಪರಿಣಾಮ ಆತನ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ತಕ್ಷಣವೇ ಐಸಿಯುವಿಗೆ ಶಿಫ್ಟ್ ಮಾಡಲಾಗಿದೆ.

ತಪ್ಪು ರಕ್ತವನ್ನು ನೀಡಿದ ಕೆಲವೇ ಸಮಯದಲ್ಲಿ ಪುನೀತ್ ಸೂರ್ಯ ಅವರಿಗೆ ತೀವ್ರ ತಲೆನೋವು, ಹೃದಯ ಭಾಗದಲ್ಲಿ ತೀವ್ರ ನೋವು, ಉಸಿರಾಟದ ಸಮಸ್ಯೆ ಹಾಗೂ ಸಂಪೂರ್ಣ ದೇಹ ನಡುಗುವಂತಹ ಗಂಭೀರ ಲಕ್ಷಣಗಳು ಕಾಣಿಸಿಕೊಂಡಿವೆ. ನೋವು ಹೆಚ್ಚಾಗುತ್ತಿರುವುದನ್ನು ಪುನೀತ್ ಆಸ್ಪತ್ರೆ ಸಿಬ್ಬಂದಿಗೆ ತಿಳಿಸಿದರೂ, “ಏನೂ ಆಗಲ್ಲ, ಸುಮ್ಮನೆ ಇರಿ” ಎಂದು ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.

ಈ ಕುರಿತು ಜಯನಗರ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಸುರೇಂದ್ರ ಪ್ರತಿಕ್ರಿಯೆ ನೀಡಿದ್ದು, “ಲ್ಯಾಬ್ ಟೆಕ್ನಿಷಿಯನ್ ಉಮೇಶ್ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ಘಟನೆಯ ಕುರಿತು ವಿವರವಾದ ವರದಿ ಸಲ್ಲಿಸಲು ಸಮಿತಿಯನ್ನು ರಚಿಸಲಾಗಿದೆ. ವಿಷಯವನ್ನು ಈಗಾಗಲೇ ಉನ್ನತ ಅಧಿಕಾರಿಗಳ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದ್ದಾರೆ.

You may also like