Home » SSLC Student: ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ಘೋಷಣೆ!

SSLC Student: ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ಘೋಷಣೆ!

0 comments
SSLC

SSLC Student: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಸರಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ 100 ಗ್ರಾಂ ಚಿನ್ನದ ಪದಕ ನೀಡುವುದಾಗಿ ಘೋಷಿಸಲಾಗಿದೆ.

ಶಿಕ್ಷಣ ಪ್ರೇಮಿ, ಹಂಪಿ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಮಾಜಿ ಸದಸ್ಯ ಡಾ.ಫಕೀರ ಗೌಡ್ರ ಪಾಟೀಲ ಅವರು ಈ ಘೋಷಣೆ ಮಾಡಿದ್ದಾರೆ.

ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವ ಶಿಗ್ಗಾಂವಿ ಕ್ಷೇತ್ರದ ವಿದ್ಯಾರ್ಥಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದರೆ 15 ಗ್ರಾಂ ಚಿನ್ನದ ಪದಕ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ 8,9 ನೇ ತರಗತಿ ಓದಿರಬೇಕು. ಶಿಗ್ಗಾಂವಿ ಕ್ಷೇತ್ರದ ವಿದ್ಯಾರ್ಥಿಗಳು ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಅಂಕ ಗಳಿಸುವ ಉದ್ದೇಶದಿಂದ ಈ ಬಹುಮಾನ ಘೊಷಣೆ ಮಾಡಿರುವುದಾಗಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.

You may also like