1
19 ವರ್ಷದ ಯುವತಿಯೊಬ್ಬಳು ತನ್ನ ಮನೆಯ ಆವರಣದಲ್ಲಿರುವ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೇರಳದ ತ್ರಿಶೂರ್ ನಲ್ಲಿ ನಡೆದಿದೆ. ಮೃತ ಯುವತಿಯನ್ನು ಶಾಂತವನ(19) ಎಂದು ಗುರುತಿಸಲಾಗಿದೆ. ಈಕೆ ಇರಿಂಜಲಕುಡ ಮೂಲದ ನಿವಾಸಿ.
ಗುರುವಾರ 11.30 ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ. ಕೊಡುಂಗಲ್ಲೂರಿನ ಕೆಕೆಟಿಎಂ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಪೂರ್ವ ವಿದ್ಯಾರ್ಥಿನಿಯಾಗಿದ್ದ ಈಕೆ ಪಾಲಕರು ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಜ್ಯೋತಿ ಪ್ರಕಾಶ್ ಮತ್ತು ರಜಿತಾ ದಂಪತಿಯ ಪುತ್ರಿ ಮೃತ ಯುವತಿ. ಆಕೆಯ ಮೃತದೇಹವನ್ನು ಇರಿಂಜಲಕುಡದಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಾಂತರಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ತ್ರಿಶೂರ್ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಕಟ್ಟೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ಆರಂಭಿಸಿದ್ದಾರೆ.
