Home » K J George : ರಾಜ್ಯದಲ್ಲಿ ರೈತರ 4.5 ಲಕ್ಷ ಪಂಪ್ ಸೆಟ್’ಗಳು ಸಕ್ರಮ!!

K J George : ರಾಜ್ಯದಲ್ಲಿ ರೈತರ 4.5 ಲಕ್ಷ ಪಂಪ್ ಸೆಟ್’ಗಳು ಸಕ್ರಮ!!

0 comments

K J George : ರಾಜ್ಯ ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದ್ದು ಸುಮಾರು ನಾಲ್ಕೂವರೆ ಲಕ್ಷ ಪಂಪ್‌ ಸೆಟ್‌ಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರವು ಸಿದ್ಧವಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಹೌದು, ರಾಜ್ಯದಲ್ಲಿ ಸುಮಾರು 4.5 ಲಕ್ಷ ರೈತರು ತಮ್ಮ ಪಂಪ್ಸೆಟ್ಗಳನ್ನು ಸಕ್ರಮಗೊಳಿಸಬೇಕೆಂದು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸರಕಾರಕ್ಕೆ ಹಣ ಪಾವತಿಸಿರುವ ರೈತರ ಅರ್ಜಿಗಳನ್ನು ಸಕ್ರಮಗೊಳಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದರು.

ಕುಸುಮ್‌ ಸಿ ಯೋಜನೆಯಡಿ ಒಂದು ವರ್ಷದಲ್ಲಿ2500 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆ ಮಾಡುವ ಮೂಲಕ ರೈತರಿಗೆ ತೊಂದರೆಯಾಗದಂತೆ ಸಮರ್ಪಕ ವಿದ್ಯುತ್‌ ನೀಡಲು ಉದ್ದೇಶಿಸಲಾಗಿದೆ. ಮುಖ್ಯಮಂತ್ರಿಯವರ ನಿರ್ದೇಶನದ ಮೇರೆಗೆ ರೈತರಿಗೆ 7 ಗಂಟೆ ವಿದ್ಯುತ್‌ ನೀಡಲಾಗುತ್ತಿದೆ. ರಾಜ್ಯದಲ್ಲಿಯಾವುದೇ ಉಪಕೇಂದ್ರಗಳ ಕಾಮಗಾರಿ ಮುಗಿದ ಕೂಡಲೇ ರೈತರಿಗೆ ವಿದ್ಯುತ್‌ ನೀಡಬೇಕು. ಉದ್ಘಾಟನೆಗಾಗಿ ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದ್ದಾರೆ.

ಅಲ್ಲದೆ ಇಂಧನ ಇಲಾಖೆಯಿಂದ ಈಗಾಗಲೇ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಲು ಇಂಧನ ಇಲಾಖೆಗೆ ಅಗತ್ಯವಿರುವ 3000 ಪವರ್ ಮ್ಯಾನ್ (ಲೈನ್ ಮೆನ್) ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದ್ದು, 3 ಲಕ್ಷ ಅರ್ಜಿಗಳು ಸ್ವೀಕೃತವಾಗಿವೆ. ಈಗಾಗಲೇ ಅರ್ಜಿಗಳ ಪರಿಶೀಲನಾ ಹಂತ ಮುಗಿದಿದ್ದು 1:5 ರನ್ವಯ ದೈಹಿಕ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು. ಬಳಿಕ ಪಾರದರ್ಶಕವಾಗಿ ಮೀಸಲು ಹಾಗೂ ಅಂಕಗಳ ಆಧಾರದ ಮೇಲೆ ಏಪ್ರಿಲ್ ಒಳಗಾಗಿ ನೇಮಕ ನಡೆಯಲಿದೆ. ಆದರೆ, ಆಕಾಂಕ್ಷಿಗಳು ಯಾವುದೇ ಮಧ್ಯವರ್ತಿಗಳ ಬಳಿ ಹಣಕೊಟ್ಟು ಕಳೆದುಕೊಳ್ಳಬೇಡಿ. ಯಾರಾದರೂ ಆಮಿಷವೊಡ್ಡಿದಲ್ಲಿ ಇಲಾಖೆ ಗಮನಕ್ಕೆ ತರಬೇಕು ಎಂದು ತಿಳಿಸಿದರು.

You may also like