ಹುಬ್ಬಳ್ಳಿ: ಮನೆಯಲ್ಲಿ ವಿಪರೀತ ಬಡತನವಿದ್ದರೂ ನಿರಂತರ ಪರಿಶ್ರಮದಿಂದ ಸರಕಾರಿ ಕಾಲೇಜಿನ ವಿದ್ಯಾರ್ಥಿಯೊಬ್ಬಳು ದ್ವಿತೀಯ ಪಿಯುಸಿ ಕಲಾ ವಿಭಾಗದ ಪಡೆದ ಪರೀಕ್ಷೆಯಲ್ಲಿ ನಗರದ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದಿದ್ದಾಳೆ.
ಹುಬ್ಬಳ್ಳಿಯ ಗೋಪನಕೊಪ್ಪದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಾಗವೇಣಿ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದಿದ್ದಾಳೆ. ಕನ್ನಡ-99, ಹಿಂದಿ- 96, ಭೂಗೋಳಶಾಸ್ತ್ರ-100, ರಾಜಕೀಯ ಶಾಸ್ತ್ರ-100, ಶಿಕ್ಷಣ-99 ಹೀಗೆ ಅತ್ಯುನ್ನತ ಅಂಕಗಳನ್ನು ಪಡೆದಿದ್ದಾಳೆ.
ಆಕೆಯ ತಂದೆ ಅಂಥೋನಿ ರಾಯಚೂರು ಗಾರೆ ಕೂಲಿ ಕೆಲಸ ಮಾಡುತ್ತಿದ್ದು, ತಾಯಿ ಸುಲೋಚನಾರವರು ಮನೆಕೆಲಸ ಮಾಡುತ್ತಿದ್ದಾರೆ. ರಜೆ ಇದ್ದಾಗ ಪಾರ್ಟ್ ಟೈಮ್ ಕೆಲಸ ಮಾಡಿಕೊಂಡು ಶಿಕ್ಷಣ ಪೂರೈಸಿದ್ದಾಳೆ. ಆಕೆಗೆ ಕಾಲೇಜು ಶುಲ್ಕ ಪಾವತಿಸಲು ಕೂಡಾ ಕಷ್ಟವಿತ್ತು.ವಿದ್ಯಾರ್ಥಿನಿಯ ಕಲಿಕಾ ಸಾಮರ್ಥ್ಯ ಗುರುತಿಸಿ ಕಾಲೇಜಿನ ಉಪನ್ಯಾಸಕರು ಪುಸ್ತಕ ಹಾಗೂ ಆರ್ಥಿಕ ನೆರವು ನೀಡಿದ್ದರು. ವಿವಿಧ ಸಂಘ ಸಂಸ್ಥೆಗಳ ಸ್ಕಾಲರ್ ಶಿಪ್ ಸಹಾಯದಿoದ ಕಾಲೇಜಿನ ಶುಲ್ಕ ಕಟ್ಟಿದ್ದಳು.
ನಾಗವೇಣಿ ರಾಯಚೂರುಗೆ, ರಾಜ್ಯಕ್ಕೆ ಮೊದಲ ಬ್ಯಾಂಕ್ ಬರುವ ನಿರೀಕ್ಷೆಯಿತ್ತು. ಕಷ್ಟಪಟ್ಟು ಓದುವ ಬದಲು ಇಷ್ಟಪಟ್ಟು ಓದಿದೆ. ಕಾಲೇಜು ಹಾಗೂ ಕಾಲೇಜಿನ ಉಪನ್ಯಾಸಕರು ಸಾಕಷ್ಟು ನೆರವು ನೀಡಿದ್ದಾರೆ ಎಂದು ಆಕೆ ನೆನಪಿಸಿಕೊಂಡಿದ್ದಾರೆ.
