Home » Shilpa shetty: 60 ಕೋಟಿ ವಂಚನೆ ಪ್ರಕರಣ; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

Shilpa shetty: 60 ಕೋಟಿ ವಂಚನೆ ಪ್ರಕರಣ; ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

0 comments

Shilpa shetty: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa shetty) ಮತ್ತು ಅವರ ಪತಿ ರಾಜ್ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್‌ ಹೊರಡಿಸಿದ್ದಾರೆ.

ತಮ್ಮ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ನ (ಈಗ ಕಾರ್ಯನಿರ್ವಹಿಸುತ್ತಿಲ್ಲ) ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಈ ಸೆಲೆಬ್ರಿಟಿ ದಂಪತಿ, ಉದ್ಯಮಿಯೊಬ್ಬರಿಗೆ ಸುಮಾರು 60 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

2015 ರಿಂದ 2023 ರ ನಡುವೆ, ದಂಪತಿ ತಮ್ಮ ವ್ಯವಹಾರವನ್ನು ವಿಸ್ತರಿಸುವ ನೆಪದಲ್ಲಿ ನನ್ನಿಂದ 60 ಕೋಟಿ ರೂ.ಗಳನ್ನು ಪಡೆದಿದ್ದಾರೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ದೀಪಕ್ ಕೊಠಾರಿ ಆರೋಪಿಸಿದ್ದರು. ದಂಪತಿ ಹಣವನ್ನು ಸಾಲವಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:Bomb threat: 400 ಕೆಜಿ ಆರ್‌ಡಿಎಕ್ಸ್‌ – ಮುಂಬೈನ 34 ಸ್ಥಳಗಳಲ್ಲಿ ಮಾನವ ಬಾಂಬ್ ಸ್ಫೋಟದ ಬೆದರಿಕೆ – ಪೊಲೀಸರು ಕಟ್ಟೆಚ್ಚರ

12% ವಾರ್ಷಿಕ ಬಡ್ಡಿಯೊಂದಿಗೆ ನಿರ್ದಿಷ್ಟ ಸಮಯದೊಳಗೆ ಹಣ ಹಿಂತಿರುಗಿಸುವುದಾಗಿ ಶಿಲ್ಪಾ ಶೆಟ್ಟಿ ಭರವಸೆ ನೀಡಿದ್ದರು. 2016ರಲ್ಲಿ ಲಿಖಿತವಾಗಿ ವೈಯಕ್ತಿಕ ಖಾತರಿ ಕೂಡ ನೀಡಿದ್ದರು. ಆದರೆ, ಕೆಲವೇ ತಿಂಗಳುಗಳಲ್ಲಿ ಶಿಲ್ಪಾ ಶೆಟ್ಟಿ ಅವರು ಸಂಸ್ಥೆ ನಿರ್ದೇಶಕಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಉದ್ಯಮಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

You may also like