Home News ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ

ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ

Hindu neighbor gifts plot of land

Hindu neighbour gifts land to Muslim journalist

ಕಾರ್ಕಳದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ77 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಧ್ವಜಾರೋಹಣವನ್ನು ನೆರವೇರಿಸಿದರು.

ದೇಶವುಸ್ವಾತಂತ್ರ್ಯಗೊಂಡ ಬಳಿಕ ತನ್ನದೇ ಆದ ಆಡಳಿತ ವ್ಯವಸ್ಥೆಯನ್ನು ರೂಪಿಸಿಕೊಂಡದ್ದು ಸಂವಿಧಾನದ ರಚನೆಯಿಂದಾಗಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ನಮ್ಮ ದೇಶಕ್ಕೆ ಒಂದು ಉತ್ತಮ ಸಂವಿಧಾನವನ್ನು ರಚಿಸಿಕೊಟ್ಟರು. ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವುದುಭಾರತದ ಪ್ರಜೆಗಳಾದ ನಮ್ಮೆಲ್ಲರ ಆದ್ಯ ಕರ್ತವ್ಯ. ಜೀವನದಲ್ಲಿ ದೇಶಪ್ರೇಮವನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ಈ ಸಮಾಜದಲ್ಲಿ ಬಾಳಿ ಬದುಕಬೇಕು ಎಂದು ಧ್ವಜಾರೋಹಣವನ್ನು ನೆರವೇರಿಸಿವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ವಾಸ್ತುಶಿಲ್ಪಿಗಳಾದ ಪ್ರೊ. ವಸಂತ ಭಟ್ ದೇಶದಸ್ವಾತಂತ್ರ್ಯಕ್ಕಾಗಿ, ಭಾರತವನ್ನು ಗಣತಂತ್ರ ರಾಷ್ಟ್ರವನ್ನಾಗಿಸುವಲ್ಲಿ ತಮ್ಮನ್ನು ಅರ್ಪಿಸಿಕೊಂಡಹೋರಾಟಗಾರರ ಬಗ್ಗೆ ತಿಳಿಸುತ್ತಾ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಸಹಸಂಸ್ಥಾಪಕರಾದ ಶ್ರೀ ಅಶ್ವತ್ ಎಸ್ .ಎಲ್. ಹಿರಿಯ ವಾಸ್ತುಶಿಲ್ಪಿಗಳಾದಸುನಿಲ್ ಕುಮಾರ್ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಆಂಗ್ಲ ಭಾಷೆ ಉಪನ್ಯಾಸಕಿಯಾದ ಪವಿತ್ರ ನಡೆಸಿಕೊಟ್ಟರು. ಉಪನ್ಯಾಸಕ ವರ್ಗದವರು,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಈ ಧ್ವಜಾರೋಹಣಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.