Home » ದೇಶದ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಆದಿತ್ಯ ನಾಥ್ ದೇ ಹವಾ | ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆಯಲ್ಲಿ ಬಹಿರಂಗ !

ದೇಶದ ದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಮ್ಮೆ ಯೋಗಿ ಆದಿತ್ಯ ನಾಥ್ ದೇ ಹವಾ | ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆಯಲ್ಲಿ ಬಹಿರಂಗ !

0 comments

ನವದೆಹಲಿ: ದೇಶದ ಬಹುದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಮತ್ತೊಂದು ಬಾರಿಗೆ ಕೇಸರಿ ಧ್ವಜ ಪಟಪಟಿಸಲಿದೆ. ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ‘ಎಬಿಪಿ ನ್ಯೂಸ್-ಸಿ ವೋಟರ್’ ಸಮೀಕ್ಷೆ ವರದಿ ತಿಳಿಸಿದೆ.

ಹಾಗೆಂದು ಸುದ್ದಿ ಸಂಸ್ಥೆ ‘ಐಎಎನ್‌ಎಸ್’ ವರದಿ ಮಾಡಿದೆ. ಆದರೆ ಕಳೆದ ಚುನಾವಣೆಗೆ ಹೋಲಿಸಿದಾಗ ಬಿಜೆಪಿ ಬಹುಮತದಲ್ಲಿ ಭಾರಿ ಇಳಿಕೆ ಕಂಡುಬರಲಿದೆ ಎಂದು ಹೇಳಿದೆ. ಬರೋಬ್ಬರಿ 100 ಸೀಟುಗಳನ್ನು ಬಿಜೆಪಿ ಕಳೆದುಕೊಳ್ಳುವ ಸಂಭವ ಇದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಕಳೆದ ಸಲ 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಳೆದ ಬಾರಿ 325 ಸೀಟು ಗಳಿಸಿ ಅತ್ಯಂತ ಜನಪ್ರಿಯ ಪಕ್ಷವಾಗಿ ಮೂಡಿ ಬಂದಿತ್ತು. ಆದರೆ ಬರುವ ಚುನಾವಣೆಯಲ್ಲಿ ಸುಮಾರು 100 ಸೀಟುಗಳನ್ನು ಅದು ಕಳೆದುಕೊಳ್ಳಲಿದೆ. ಆದರೂ ಅದು ತನ್ನ ಅಧಿಕಾರವನ್ನು ಕೈಯಲ್ಲೇ ಇಟ್ಟುಕೊಳ್ಳಲಿದೆ.
ಆಡಳಿತಾರೂಢ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಸಮಾಜವಾದಿ ಪಕ್ಷವು 151ರಿಂದ 163 ಸೀಟು ಪಡೆಯಲಿದೆ. ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಹಾಗೂ ಕಾಂಗ್ರೆಸ್‌ಗೆ ಮತ್ತೆ ತೀವ್ರ ಹಿನ್ನಡೆ ಎದುರಾಗಲಿದೆ ಎಂದು ಸಮೀಕ್ಷೆಯು ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ ಶೇ. 41ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದಾರೆ.

18 ವರ್ಷಕ್ಕೂ ಮೇಲ್ಪಟ್ಟ ಮತದಾರರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಈ ಅಂಕಿಅಂಶ ಬಯಲಾಗಿದೆ. ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ಮುಂತಾದ ಪಂಚ ರಾಜ್ಯಗಳಲ್ಲಿ ಸಮೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಶೇಕಡಾ 40.4ರಷ್ಟು ಮತಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. 2017ರಲ್ಲಿ ಇದು 41.4 ಆಗಿತ್ತು. ಅತ್ತ ಸಮಾಜವಾದಿ ಪಕ್ಷವು 2017ಕ್ಕಿಂತ (ಶೇ. 23.6) ಶೇ.10 ಹೆಚ್ಚು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದಿದೆ ಎಬಿಪಿ ನ್ಯೂಸ್-ಸಿ ವೋಟರ್ ನಡೆಸಿದ ಸಮೀಕ್ಷೆ.

You may also like

Leave a Comment