1
Death : ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ (Death)ಘಟನೆ ಸೋಮವಾರ ಸಂಜೆ ನಡೆದಿದೆ.
ಸೋಮವಾರ ಸಂಜೆ ಸಹಪಾಠಿಗಳ ಜೊತೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದು ಈ ಘಟನೆ ನಡೆದಿದೆ. ವಿಷ್ಯ ತಿಳಿದ ಕೂಡಲೇ ಬಾಲಕಿಯನ್ನು ಮೇಲಕ್ಕೆತ್ತಿ ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.
