Home » C P Yogishwar: ಪತ್ನಿ, ಪುತ್ರಿಯಿಂದಲೇ ಶಾಸಕ ಸಿಪಿ ಯೋಗೀಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ದೂರು!!

C P Yogishwar: ಪತ್ನಿ, ಪುತ್ರಿಯಿಂದಲೇ ಶಾಸಕ ಸಿಪಿ ಯೋಗೀಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ ಗೆ ದೂರು!!

by V R
0 comments

CP Yogishwar: ಚನ್ನಪಟ್ಟಣ ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಪತ್ನಿ ಹಾಗೂ ಪುತ್ರಿ ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಿದ್ದಾರೆ.

ಹೌದು.. ಯೋಗೇಶ್ವರ್ ಪತ್ನಿ ಮಾಳವಿಕಾ ಸೋಲಂಕಿ ಹಾಗೂ ಪುತ್ರಿ ನಿಶಾ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ದೂರು ನೀಡಿ ಬಳಿಕ ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

ದೂರಿನಲ್ಲೇನಿದೆ..?:

ರಾಜ್ಯ ಉಸ್ತುವಾರಿಯನ್ನು ಭೇಟಿಯಾದ ತಾಯಿ-ಮಗಳು ಶಾಸಕ ಸಿಪಿವೈ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿ.ಪಿ.ಯೋಗೇಶ್ವರ್ ತಮ್ಮದೇ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಪದೇ ಪದೇ ಕೋರ್ಟ್ ಗಳಲ್ಲಿ ಕೇಸ್ ಹಾಕುತ್ತಿದ್ದಾರೆ. ಕಾನೂನಾತ್ಮಕವಾಗಿ ನಾವು ದೂರವಾಗಿಲ್ಲ. ಆದರೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸರಿಪಡಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Cattle Theft: ಜಾನುವಾರು ಕಳ್ಳತನ ಮಾಡಿ ಸಾಗಾಟ – ನಾಲ್ವರ ಬಂಧನ

You may also like