3
Ballari: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.
ಕಾಳಂಗೇರಿಯ ದೀಕ್ಷಾ ( 12) ಮೃತ ಬಾಲಕಿ. ಈಕೆ 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಶಾಲೆಗೆ ಹೋಗಿದ್ದಾಳೆ. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಆಕೆಯಲ್ಲಿ ಮನೆಮಂದಿ ಸಂಡೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ.
ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: KEA: ಕೆಇಎ, ಕಾಮೆಡ್-ಕೆ ವೇಳಾಪಟ್ಟಿ ಪ್ರಕಟ
