Home » Kalburagi: ಕಲಬುರಗಿಯಲ್ಲಿ ಘೋರ ಘಟನೆ – 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಶಿಕ್ಷಕನಿಂದ ರೇಪ್

Kalburagi: ಕಲಬುರಗಿಯಲ್ಲಿ ಘೋರ ಘಟನೆ – 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಶಿಕ್ಷಕನಿಂದ ರೇಪ್

1 comment

Kalaburagi: ಖಾಸಗಿ ಶಾಲಾ ಶಿಕ್ಷಕನೋರ್ವ 5ನೇ ತರಗತಿ ವಿದ್ಯಾರ್ಥಿಯ ಮೇಲೆ ಅತ್ಯಾಚಾರವೆಸಗಿರುವ ಅವಮಾನಕರ ಘಟನೆ ಕಲಬುರಗಿಯಲ್ಲಿ(Kalaburagi) ನಡೆದಿದೆ. ಇದೀಗ ಶಿಕ್ಷಕನನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಮಾಹಿತಿ ದೊರೆತಿದೆ.

ಹೌದು, ಶಾಲೆಯೊಂದರಲ್ಲಿ ಸಂತ್ರಸ್ತ ಮಗು ಕಳೆದ ಎರಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ. ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ. ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ, ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪಾಲಕರು ತಮ್ಮ ಸಮುದಾಯದ ಎಲ್ಲ ಹಿರಿಯರೊಂದಿಗೆ ಚರ್ಚಿಸಿ ಸೋಮವಾರ ಸಾಯಂಕಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಧ್ಯ ಯಡ್ರಾಮಿ ಠಾಣಾ ಪೋಲಿಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು. ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ದೊರೆತಿದೆ.

You may also like

Leave a Comment