Home » Karkala: ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ!

Karkala: ಬಕ್ರೀದ್ ಆಚರಣೆಯ ವೇಳೆ ಅನಧೀಕೃತ ಜಾನುವಾರು ವಧೆ, ಸಾಗಾಣಿಕೆ ಕಂಡುಬಂದಲ್ಲಿ ಕಾನೂನು ಕ್ರಮ ಜಾರಿ!

0 comments

Karkala: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಈ ವಿಚಾರ ಪ್ರಸ್ತಾಪ ಮಾಡಿದ್ದಾರೆ.

ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು.

You may also like