Home » Terrorist: ಬೆಂಗಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ!

Terrorist: ಬೆಂಗಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ!

0 comments

Terrorist: ಈಗಾಗಲೇ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ, ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಇದೀಗ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ.

ಸದ್ಯ ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಅಸ್ಸಾಂನ (Assam) ಉತ್ತರ ಲಖೀಂಪುರದಲ್ಲಿ ಜೀವಂತ ಐಇಡಿಗಳನ್ನ (ಸುಧಾರಿತ ಸ್ಫೋಟಕ ಸಾಧನ) ವಶಕ್ಕೆ ಪಡೆದಿದ್ದಾರೆ.

ಹೌದು, ಎನ್‌ಐಎ ಅಧಿಕಾರಿಗಳ ವಿಚಾರಣೆ ವೇಳೆ ಶಂಕಿತ (Suspected Terrorist) ಉಗ್ರ ಗಿರಿಸ್ ಬೋರಾ ಅಲಿಯಾಸ್‌ ಗೌತಮ್, ಅಸ್ಸಾಂನಲ್ಲಿ ಐಇಡಿ ಇಟ್ಟ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆಗಸ್ಟ್‌ 15ರಂದು ಸ್ಫೋಟಿಸಲು ಪ್ಲಾನ್ ಮಾಡಲಾಗಿತ್ತು, ಉಲ್ಫಾ(I) ಸಂಘಟನೆಯ ನಾಯಕರು ಹೇಳಿದಂತೆ ಐಇಡಿಗಳನ್ನ ಇಟ್ಟಿದ್ದೆ ಎಂದೂ ತಪ್ಪು ಒಪ್ಪಿಕೊಂಡಿದ್ದಾನೆ.

ನಂತರ ಶಂಕಿತ ಉಗ್ರನ ಮಾಹಿತಿ ಮೇರೆಗೆ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳು ಲಖೀಂಪುರ ಜಿಲ್ಲೆಯಲ್ಲಿ ಇಟ್ಟಿದ್ದ ಕೆಲವು ಜೀವಂತ ಐಇಡಿಗಳನ್ನ ವಶಕ್ಕೆ ಪಡೆದಿದ್ದಾರೆ. ಇದೀಗ ಈ ಸಂಬಂಧ ಹೆಚ್ಚಿನ ತನಿಖೆಯನ್ನೂ ಮುಂದುವರಿಸಿದ್ದಾರೆ.

You may also like

Leave a Comment