4
Rajat & Vinay: ರೀಲ್ಸ್ ಮಾಡುವಾಗ ಮಚ್ಚು ಪ್ರದರ್ಶನ ಮಾಡಿದ ಪ್ರಕರಣಕ್ಕೆ ಕುರಿತಂತೆ ಮಾಜಿ ಬಿಗ್‌ಬಾಸ್ ಸ್ಪರ್ಧಿಗಳಾದ ವಿನಯ್ ಮತ್ತು ರಜತ್‌ಗೆ ಜಾಮೀನು ಮಂಜೂರಾಗಿದೆ.
ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ನಂತರ ಸಾಕ್ಷ್ಯ ನಾಶ ಪ್ರಕರಣದಡಿ ಇಬ್ಬರನ್ನೂ ಬಂಧನ ಮಾಡಲಾಗಿತ್ತು
ಇದೀಗ ಇಬ್ಬರಿಗೂ ಸಹ ಷರತ್ತುಬದ್ಧ ಜಾಮೀನು ನೀಡಲಾಗಿದೆ.
ಬಂಧಿತ ಆರೋಪಿಗಳು ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿ ವಿಚಾರಣೆ ಮಾಡಿದ 24ನೇ ಎಸಿಜೆಎಂ ಕೋರ್ಟ್, ತಲಾ 10 ಸಾವಿರ ರೂಪಾಯಿ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ. ಜಾಮೀನು ಪ್ರಕ್ರಿಯೆ ಮುಗಿದ ನಂತರ, ಇಂದೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
