Home » Uppinangady: ರಸ್ತೆ ದಾಟುತ್ತಿದ್ದ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವು

Uppinangady: ರಸ್ತೆ ದಾಟುತ್ತಿದ್ದ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವು

by ಕಾವ್ಯ ವಾಣಿ
0 comments

Uppinangady: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ದ್ವಿಚಕ್ರ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನ ಎಲೈಸಿ ಕಚೇರಿ ಮುಂಭಾಗ ಸೋಮವಾರ ನಡೆದಿದೆ.

ಉಪ್ಪಿನಂಗಡಿಗೆ (Uppinangady) ತೆರಳಲು ರಸ್ತೆ ದಾಟುತ್ತಿದ್ದ ಉಪ್ಪಿನಂಗಡಿ ಸಮೀಪದ ನಟ್ಟಿಬೈಲು ಎಂಬಲ್ಲಿನ ನಿವಾಸಿ ಕೆ.ಸದಾರಾಮ ಅವರ ಪತ್ನಿ ಸರಸ್ವತಿ (50) ಅವರಿಗೆ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಯ ಭಾಗಕ್ಕೆ ಗಾಯಗಳಾಗಿದ್ದು, ಕೂಡಲೇ ಅವರನ್ನು ಸಮೀಪದ ತುಂಬೆಯಲ್ಲಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಪತಿ ಎಲೈಸಿ ಏಜೆಂಟ್ ಆಗಿದ್ದು, ಕಚೇರಿಯಲ್ಲಿ ಕಾರ್ಯಕ್ರಮವೊಂದು ಇದ್ದ ಕಾರಣ ಇವರು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಪಾಣೆಮಂಗಳೂರಿನ ಟ್ರಾಫಿಕ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like