Puttur: ಫೆ.4 (ಬುಧವಾರ) ರಂದು ತಡರಾತ್ರಿ ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತ ಹೊಂದಿದ್ದಾರೆ. ಚೇತನ್ ಕೆಮ್ಮಿಂಜೆ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದರು.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿ ಚೇತನ್ ಅವರ ಜೊತೆ ಇನ್ನೋರ್ವ ಬಾಲಕ ಇದ್ದಿದ್ದು ತಿಳಿದು ಬಂದಿದೆ. ಚೇತನ್ ಅವರು ನೆಹರೂ ನಗರದ ಮತಾವುನಲ್ಲಿರುವ ತನ್ನ ಸಂಬಂಧಿಕರ ಮನೆಗೆಂದು ಬಂದಿದ್ದು, ಅಲ್ಲಿಂದ ಬಾಲಕನನ್ನು ಚುರುಮುರಿ ತಿನ್ನಿಸಲೆಂದು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಸವಾರ ಮತ್ತು ಬಾಲಕ ಅಪಘಾತದ ಸಂದರ್ಭದಲ್ಲಿ ಡಾಮಾರು ರಸ್ತೆಗೆ ಎಸೆಯಲ್ಪಟ್ಟಿದ್ದು, ಬಾಲಕ ಅಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ. ಚೇತನ್ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಬದುಕುಳಿಯಲಿಲ್ಲ. ಬಾಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುರಿತು ವರದಿಯಾಗಿದೆ.
