5
Accident: ಸಕಲೇಶಪುರ ರಾಷ್ಟ್ರೀಯ ಹೆದ್ದಾರಿ- 75 ಶಿರಾಡಿಘಾಟ್ ಮಾರನಹಳ್ಳಿ ಸಮೀಪ ಜೂ 21 ರ ಸಂಜೆ ಕೆ.ಎಸ್. ಆರ್.ಟಿ.ಸಿ. ಬಸ್ ಹಾಗೂ ಟ್ಯಾಂಕರ್ ನಡುವೆ ಅಪಘಾತ (Accident) ನಡೆದಿದ್ದು, ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಹಾಗೂ ಟ್ಯಾಂಕರ್ ಚಾಲಕನ ಕಾಲು ಸಿಲುಕಿಕೊಂಡಿದ್ದು ಸ್ಥಳೀಯರ ನೆರವಿನಿಂದ ಆತನನ್ನು ಹೊರಕ್ಕೆ ತೆಗೆಯಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.
