Home » Deadly Accident: ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು!

Deadly Accident: ಚಿತ್ರದುರ್ಗದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು!

0 comments

Deadly Accident: ಡಿವೈಡರ್‌ಗೆ ಇನ್ನೋವಾ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಈ ಘಟನೆ ನಡೆದಿದೆ.

ಇನ್ನೋವಾ ಕಾರಿನ ಟೈರ್‌ ಸ್ಫೋಟಗೊಂಡು ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ಅರ್ಜುನ್‌ (28), ಸರವಣ್‌ (30), ಶ್ರೀಧರ್‌ (30) ಎಂದು ಗುರುತಿಸಲಾಗಿದೆ. ಆರು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

You may also like