Tumkur: ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆಂದು ತೆರಳಿದ್ದಂತಹ ತುಮಕೂರಿನ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆಯೊಂದು ಆಂಧ್ರ ಪ್ರದೇಶದ ಕುರ್ನೂಲ್ ಬಳಿ ನಡೆದಿದ್ದು,ಮೃತ ದುರ್ದೈವಿಗಳಾದಂತಹ ನವೀನ್(48), ಸಂತೋಷ್(35), ಲೋಕೇಶ್ (38) ಇವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾಗಿದ್ದಾರೆ.
ನವೀನ್, ಸಂತೋಷ್, ಲೋಕೇಶ್ ಸೇರಿ ಒಟ್ಟು 6 ಮಂದಿ ಆಂಧ್ರಪ್ರದೇಶದ ಕಡೆಗೆ ಪ್ರವಾಸಕ್ಕೆಂದು ತೆರಳಿದ್ದು, ಈ ವೇಳೆ ಕಾರು ಕರ್ನೂಲ್ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿರುತ್ತದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದಂತಹ ನವೀನ್, ಸಂತೋಷ್ ಹಾಗೂ ಲೋಕೇಶ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.
ಇನ್ನುಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕರ್ನೂಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
