4
Accident: ಪುತ್ತೂರು: ಸಂಟ್ಯಾರ್ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬ್ರೆಜ್ಜಾ ಕಾರಿನ ನಡುವೆ ಶನಿವಾರ ಮಧ್ಯಾಹ್ನ ಅಪಘಾತ ನಡೆದಿದೆ.
ಮೈಸೂರಿನಿಂದ ಬರುತ್ತಿದ್ದ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಬ್ರೇಜ್ಜಾ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದಲ್ಲಿ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸಂಪ್ಯ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
