1
Prateek Chauhan: ಮಾಜಿ ಸಚಿವರೂ, ಬೀದರ್‌ನ ಔರಾದ್ ಕ್ಷೇತ್ರದ ಬಿಜೆಪಿ ಶಾಸಕರೂ ಆಗಿರುವ ಪ್ರಭು ಚೌಹಾಣ್ (Prabhu Chauhan) ಪುತ್ರನ ವಿರುದ್ಧ ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ (Womenʼs Commission) ದೂರು ನೀಡಿದ್ದಾರೆ.
ಪ್ರಭು ಚೌಹಾಣ್ ಅವರ ಪುತ್ರ ಪ್ರತೀಕ್ ಚೌಹಾಣ್ (Prateek Chauhan) ತನ್ನನ್ನ ಮದುವೆಯಾಗೋದಾಗಿ ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಯುವತಿಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಈ ಬಗ್ಗೆ ಔರಾದ್‌ನ ಹೋಕ್ರಾಣಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರೆ, ಪೊಲೀಸರು ದೂರು ಸ್ವೀಕರಿಸಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ.
