Ranya Rao: ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಕನ್ನಡದ ನಟಿ ರನ್ಯಾ ರಾವ್(Ranya Rao) ಅವರನ್ನು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.
ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ರಾತ್ರಿ ಮರಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಏರ್ಪೋರ್ಟ್ ಕಸ್ಟಮ್ಸ್ನ ಡಿಆರ್ಐ ಅಧಿಕಾರಿಗಳು ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ರನ್ಯಾ ಮೇಲೆ ಇದೆ.
ಇವರು 2014ರಲ್ಲಿ ಸುದೀಪ್ ನಟನೆಯ ‘ಮಾಣಿಕ್ಯ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಈ ಚಿತ್ರದಲ್ಲಿ ಮಾನಸಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರು. 2016ರಲ್ಲಿ ತಮಿಳಿನ ಸಿನಿಮಾ ಒಂದನ್ನು ಮಾಡಿದ್ದಾರೆ. 2017ರಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಪಟಾಕಿ’ ಸಿನಿಮಾದಲ್ಲಿ ಸಂಗೀತಾ ಹೆಸರಿನ ಪಾತ್ರ ಮಾಡಿದ್ದಾರೆ.
