Home » Kateelu: ನಟಿ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ

Kateelu: ನಟಿ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ

0 comments

Kateelu: ಖ್ಯಾತ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರು ಕುಟುಂಬ ಸಹಿತ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗುರುವಾರ (ಫೆ.27) ಸಂಜೆ ಭೇಟಿ ನೀಡಿದ್ದಾರೆ.

 

ನಿಡ್ಡೋಡಿಯಲ್ಲಿರುವ ಕುಟುಂಬದ ಮನೆಗೆ ಭೇಟಿ ನೀಡಲು ಬರುವ ಸಂದರ್ಭದಲ್ಲಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವ ಪರಂಪರೆಯನ್ನು ನಟಿ ಶಿಲ್ಪಾ ಶೆಟ್ಟಿ ಮಾಡುತ್ತಿರುತ್ತಾರೆ. ನಟಿ ತನ್ನ ಕುಟುಂಬ ಸಮೇತರಾಗಿ ದೇವಿಯ ದರ್ಶನ ಪಡೆದಿದ್ದು, ಈ ಸಂದರ್ಭದಲ್ಲಿ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಸದಾನಂದ ಆಸ್ರಣ್ಣ ಇವರು ಉಪಸ್ಥಿತರಿದ್ದರು.

You may also like