Home » Ahemadabad Air Crash: ಅಹಮದಾಬಾದ್‌ ಏರ್‌ಇಂಡಿಯಾ ದುರಂತ ಪ್ರಕರಣ: 2ನೇ ಬ್ಲ್ಯಾಕ್‌ ಬಾಕ್ಸ್‌ ಪತ್ತೆ

Ahemadabad Air Crash: ಅಹಮದಾಬಾದ್‌ ಏರ್‌ಇಂಡಿಯಾ ದುರಂತ ಪ್ರಕರಣ: 2ನೇ ಬ್ಲ್ಯಾಕ್‌ ಬಾಕ್ಸ್‌ ಪತ್ತೆ

by Mallika
0 comments

Ahemadabad Air Crash: ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಏರ್‌ಇಂಡಿಯಾ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡನೇ ಬ್ಲ್ಯಾಕ್‌ ಬಾಕ್ಸ್‌ ಪತ್ತೆಯಾಗಿದೆ. ವಿಮಾನದಲ್ಲಿ ಎರಡು ಬ್ಲ್ಯಾಕ್‌ಬಾಕ್ಸ್‌ಗಳಿದ್ದು, ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್‌ ಶುಕ್ರವಾರ ಪತ್ತೆಯಾಗಿತ್ತು. ಕಾಕ್‌ಪಿಟ್‌ ವಾಯ್ಸ್‌ ರೆಕಾರ್ಡರ್‌ ಭಾನುವಾರ ಪತ್ತೆಯಾಗಿದೆ.

ಈಗ ದೊರಕಿರುವ ಎರಡನೇ ಬ್ಲ್ಯಾಕ್‌ ಬಾಕ್ಸ್‌ನಿಂದ ಘಟನೆಯ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎನ್ನುವುದನ್ನು ತಿಳಿದುಕೊಳ್ಳಬಹುದು. ಇದು ಕಾಕ್‌ಪಿಟ್‌ ಹಾಗೂ ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎನ್ನುವುದರ ಕುರಿತು ನಿಖರ ಮಾಹಿತಿ ನೀಡಲಿದೆ.

You may also like