1
Ahmedabad Plane Crash: ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಂದು ನಡೆದ ವಿಮಾನ ಅಪಘಾತದ ಬಗ್ಗೆ ಚೀನಾದ ರಾಯಭಾರಿ ಝು ಫಯೋಂಗ್ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದಿಂದ ನಾವು ತುಂಬಾ ದುಃಖಿತರಾಗಿದ್ದೇವೆ. ಪ್ರಯಾಣಿಕರು ಮತ್ತು ಅವರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಈ ಕಷ್ಟದ ಸಮಯದಲ್ಲಿ ಬಾಧಿತರಾದ ಎಲ್ಲರೊಂದಿಗೆ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ” ಎಂದು ಬರೆದಿದ್ದಾರೆ.

