Home » ಬಹಿರ್ದೆಸೆಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಮರ್ಡರ್ | ಅಪ್ರಾಪ್ತ ನಿಂದ ಈ ಭೀಕರ ಕೃತ್ಯ!!!

ಬಹಿರ್ದೆಸೆಗೆ ಹೋಗಿದ್ದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಮರ್ಡರ್ | ಅಪ್ರಾಪ್ತ ನಿಂದ ಈ ಭೀಕರ ಕೃತ್ಯ!!!

0 comments

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇವಲ ಒಂದೇ ದಿನದಲ್ಲಿ ಆರೋಪಿ ಬಾಲಕನನ್ನು ಅರೆಸ್ಟ್ ಮಾಡಿದ್ದು ಒಂಬತ್ತೇ ದಿನದಲ್ಲಿ ಚಾರ್ಜ್ ಸೀಟ್ ಸಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಲಬುರಗಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತಕ ಕೊಲೆ ಮಾಡಿದ್ದ ಪ್ರಕರಣದಲ್ಲಿ ತನಿಖೆ ನಡೆಸಿ, ಕೇವಲ ಒಂಬತ್ತೇ ದಿನದಲ್ಲಿ ಚಾರ್ಜ್ ಸೀಟ್ ಸಲ್ಲಿಸುವಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ನವೆಂಬರ್ 1 ರಂದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಅನಂತರ ಕೊಲೆ ಮಾಡಿದ ದಾರುಣ ಘಟನೆಯೊಂದು ನಡೆದಿತ್ತು. ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿತ್ತು. ಆಳಂದ ತಾಲೂಕಿನ ಗ್ರಾಮವೊಂದರಲ್ಲಿ ಬಹಿರ್ದೆಸೆಗೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಅನೇಕ ಕಡೆ ಪ್ರತಿಭಟನೆಗಳು ನಡೆದಿದ್ದವು.

ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದ ಆಳಂದ ಠಾಣೆಯ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದರು. ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು ಅಪ್ರಾಪ್ತ ಬಾಲಕ ಅನ್ನೋದು ತನಿಖೆಯ ಸಮಯದಲ್ಲಿ ತಿಳಿಯಿತು. ಹದಿನಾರುವರೆ ವರ್ಷದ ಬಾಲಕನೋರ್ವ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ ಎಂಬುದಾಗಿ ತನಿಖೆಯಿಂದ ತಿಳಿಯಿತು.

ಇನ್ನು ಈ ಪ್ರಕರಣದಲ್ಲಿ ಎಲ್ಲಾ ರೀತಿಯ ಸಾಕ್ಷಿಗಳನ್ನು ಸಂಗ್ರಹಿಸಿದ ಆಳಂದ ಠಾಣೆಯ ಪೊಲೀಸರು ನವಂಬರ್ 10 ರಂದೆ ಬಾಲ ನ್ಯಾಯ ಮಂಡಳಿಗೆ ಅಂತಿಮ ವರದಿ ಸಲ್ಲಿಸಿದ್ದಾರೆ. ಕೇವಲ ಒಂಬತ್ತೇ ದಿನದಲ್ಲಿ ಪ್ರಕರಣದ ಅಂತಿಮ ವರದಿ ಸಲ್ಲಿಸುವ ಮೂಲಕ ತಮ್ಮ ಕಾರ್ಯಕ್ಷಮತೆ ಮೆರದಿದ್ದಾರೆ.

ಆಳಂದ ಪೊಲೀಸರ ಕಾರ್ಯಕ್ಕೆ ಮೆಚ್ಚಿ ರಾಜ್ಯ ಡಿಜಿ&ಐಜಿ ಆಳಂದ ಪೊಲೀಸರಿಗೆ ಒಂದು ಲಕ್ಷ ಬಹುಮಾನ ನೀಡಿದ್ದರು. ಅದರಲ್ಲಿ ಐವತ್ತು ಸಾವಿರ ಹಣವನ್ನು ಪೊಲೀಸರು ಮೃತ ಬಾಲಕಿ ಕುಟುಂಬಕ್ಕೆ ನೀಡಲು ನಿರ್ಧರಿಸಿದ್ದಾರೆ. ಆಳಂದ ಠಾಣೆಯ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮತ್ತು ಗೃಹ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.

You may also like

Leave a Comment