Home » PM Modi : ಸರ್ವಪಕ್ಷ ಸಭೆ – ‘ಎಲ್ಲರೂ ಒಗ್ಗಟ್ಟಿನಿಂದ ಇರೋಣ’ ಎಂದು ಮೋದಿ

PM Modi : ಸರ್ವಪಕ್ಷ ಸಭೆ – ‘ಎಲ್ಲರೂ ಒಗ್ಗಟ್ಟಿನಿಂದ ಇರೋಣ’ ಎಂದು ಮೋದಿ

0 comments

PM Modi: ಆಪರೇಷನ್ ಸಿಂಧೂರ್ ಕುರಿತು ಹಾಗೂ ದೇಶದಲ್ಲಿ ಉಂಟಾಗಿರುವ ಯುದ್ಧದ ಸಂಧಿಗ್ದ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆಯನ್ನು ಕರೆದಿದ್ದು, ಈ ಸಭೆಯಲ್ಲಿ ಎಲ್ಲ ಪಕ್ಷದವರಿಗೂ ವಿಶೇಷ ಮನವಿಯನ್ನು ಮಾಡಿದ್ದಾರೆ.

ಹೌದು, ಆಪರೇಷನ್‌ ಸಿಂದೂರ (Operation Sindoor) ಕುರಿತು ಮಾಹಿತಿ ನೀಡಲು ಸರ್ಕಾರ ಇಂದು (ಗುರುವಾರ) ಸರ್ವ ಪಕ್ಷ ಸಭೆ ಕರೆದಿದೆ. ಸಭೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್‌ ಶಾ, ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿ ಹಲವು ನಾಯಕರು ಆಪರೇಷನ್‌ ಸಿಂದೂರ ಕುರಿತು ಮಾಹಿತಿ ನೀಡಿದ್ದಾರೆ.

ಇನ್ನು ಸಭೆಯಲ್ಲಿ ಪ್ರಧಾನಿ ಮೋದಿ, ಇಂಹತ ಉದ್ವಿಗ್ನ ಪರಿಸ್ಥಿಯಲ್ಲಿ ಸರ್ವಪಕ್ಷಗಳು ಒಗ್ಗಟ್ಟಿನಿಂದು ಇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಪಕ್ಷದ ಮುಖಂಡರು ಭಾಗಿಯಾಗಿದ್ದರು.

ಅಂದಹಾಗೆ 2019 ರ ಬಾಲಕೋಟ್ ವೈಮಾನಿಕ ದಾಳಿಯ ನಂತರ ಸಾಕ್ಷಿ ನೀಡಿ ಎಂದು ವಿಪಕ್ಷಗಳು ಕೇಳಿದ್ದವು. ಆ ಹೇಳಿಕೆಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ಬಾರಿ ವಿರೋಧ ಪಕ್ಷಗಳು ಸರ್ಕಾರ ಬೆಂಬಲ ಸೂಚಿಸುತ್ತೇವೆ ಎಂದು ಹೇಳಿಕೆ ನೀಡಿವೆ

You may also like