Home » Subrahmanya: ಸುಬ್ರಹ್ಮಣ್ಯ: ಕೆಎಸ್‌ಆರ್‌ಟಿಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ

Subrahmanya: ಸುಬ್ರಹ್ಮಣ್ಯ: ಕೆಎಸ್‌ಆರ್‌ಟಿಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ

by Praveen Chennavara
0 comments
Subrahmanya

Subrahmanya: ಕಡಬ: ಕೆಎಸ್‌ಆರ್‌ಟಿಸಿ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ(Subrahmanya)  – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸನ್ನು ಅನಿಲ ಎಂಬಲ್ಲಿ ಚಾಲಕ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ.

ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಇದನ್ನು ಓದಿ: RSS Activist Arrest: ಮುಸ್ಲಿಂ ಮಹಿಳೆಯರ ಬಗ್ಗೆ ವಾಟ್ಸಪ್‌ನಲ್ಲಿ ಮಾನಹಾನಿಕರ ಪೋಸ್ಟ್‌! RSS ಕಾರ್ಯಕರ್ತ ಅರೆಸ್ಟ್‌!!! 

You may also like

Leave a Comment