Home » Supreme court: ಸನಾತನ ಧರ್ಮಕ್ಕೆ ಅವಮಾನ? ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನ

Supreme court: ಸನಾತನ ಧರ್ಮಕ್ಕೆ ಅವಮಾನ? ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆಯಲು ಯತ್ನ

0 comments

Superem Court : ಇಂದು ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಘಟನೆ ನಡೆದಿದೆ.

ಹೌದು, ಬಾರ್ ಅಂಡ್ ಬೆಂಚ್ ವರದಿಯ ಪ್ರಕಾರ, ಸಿಜೆಐ ಬಿಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಪ್ರಕರಣಗಳ ಚರ್ಚೆ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ವಕೀಲರು ವೇದಿಕೆಯ ಬಳಿಗೆ ಬಂದು ಮುಖ್ಯ ನ್ಯಾಯಮೂರ್ತಿಗಳ ಮೇಲೆ ಎಸೆಯುವ ಉದ್ದೇಶದಿಂದ ತಮ್ಮ ಶೂ ತೆಗೆಯಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ವಕೀಲನನ್ನು ರಾಜಶೇಖರ್‌ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:Pan Card Fraud: ನಿಮ್ಮ ಹೆಸರಿನಲ್ಲಿ ಯಾರಾದರೂ ಸಾಲ ಪಡೆದಿದ್ದಾರೆಯೇ ಎಂದು ಪರಿಶೀಲಿಸುವುದು ಹೇಗೆ ?

ಭದ್ರತಾ ಸಿಬ್ಬಂದಿ ವಕೀಲರನ್ನು ನ್ಯಾಯಾಲಯದಿಂದ ಹೊರಗೆ ಕರೆದೊಯ್ದಿದ್ದು ಆ ಸಮಯದಲ್ಲಿ ಅವರು “ಸನಾತನ ಧರ್ಮಕ್ಕೆ ಆಗಿರುವ ಅವಮಾನವನ್ನು ನಾವು ಸಹಿಸುವುದಿಲ್ಲ” ಎಂದು ಕೂಗಿದ್ದಾರೆ. ಇನ್ನು ಈ ಆಘಾತಕಾರಿ ಬೆಳವಣಿಗೆಯ ಹೊರತಾಗಿಯೂ ಸಿಜೆಐ ಗವಾಯಿ ಅವರು ತಾಳ್ಮೆ ವಹಿಸಿದ್ದರು. ‘ಇದರಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗಿಲ್ಲ. ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’ ಎಂದು ಕೋರ್ಟ್‌ನಲ್ಲಿದ್ದ ವಕೀಲರಿಗೆ ವಾದವನ್ನು ಮುಂದುವರೆಸಲು ಸೂಚಿಸಿದರು.

You may also like