3
Accident: ಮಂಗಳಾದೇವಿ ಯಕ್ಷಗಾನ ಮೇಳದ ಪ್ರಸಿದ್ಧ ಭಾಗವತರಾದ ಸತೀಶ್ ಆಚಾರ್ಯ(40) ಇಂದು ಮುಂಜಾನೆ 4 ಗಂಟೆಗೆ ನಡೆದ ರಸ್ತೆ ಅಪಘಡದಲ್ಲಿ (Accident) ದುರ್ಮರಣಕ್ಕೀಡಾಗಿದ್ದಾರೆ.
ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮ ಮುಗಿಸಿ, ಮುಂಜಾನೆ 4 ಗಂಟೆಗೆ ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿದ್ದ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಕಾಂಭ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸತೀಶ್ ಆಚಾರ್ಯ ಅವರು ಸ್ಥಳದಲ್ಲೆ ಸಾವನ್ನಪ್ಪಿದರು.
