

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಸೇರಿ ಪೊಲೀಸ್ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡಿರುವ ವಿವಿಧ ದರ್ಜೆ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಒಟ್ಟಾರೆ 35 ಲಕ್ಷ ನಗದು ಬಹುಮಾನವನ್ನು ಮಂಜೂರು ಮಾಡಲಾಗಿದೆ.
ಡಿಜಿ ಮತ್ತು ಐಜಿಪಿ ದರ್ಜೆ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25 ಲಕ್ಷ ರು, ಡಿಜಿಪಿ, ಎಡಿಜಿಪಿ ಮತ್ತು ಐಜಿಪಿ(ರಾಜ್ಯ ವ್ಯಾಪ್ತಿ) ಅಧಿಕಾರಿಗಳಿಗೆ ತಲಾ 8 ಸಾವಿರದಂತೆ ಒಟ್ಟು 3 ಲಕ್ಷ ರು, ಇಲಾಖೆಯ ಇತರೆ ಅಧಿಕಾರಿ-ಸಿಬ್ಬಂದಿಗೆ ತಲಾ 5 ಸಾವಿರದಂತೆ ಒಟ್ಟು 2 ಲಕ್ಷ ರು. ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ತಲಾ 5 ಸಾವಿರದಂತೆ ಒಟ್ಟು 1 ಲಕ್ಷ ನಗದನ್ನು ಒಳ ಆಡಳಿತ ಇಲಾಖೆ ಮಂಜೂರು ಮಾಡಿದೆ.













