Home » KMF Nandini Brand: ಕೆಎಂಎಫ್ ನಂದಿನಿ ಬ್ರ್ಯಾಂಡ್ ಕಡೆಯಿಂದ ಮತ್ತೊಂದು ರುಚಿಕರ ಪಾಕ ಬಿಡುಗಡೆ!

KMF Nandini Brand: ಕೆಎಂಎಫ್ ನಂದಿನಿ ಬ್ರ್ಯಾಂಡ್ ಕಡೆಯಿಂದ ಮತ್ತೊಂದು ರುಚಿಕರ ಪಾಕ ಬಿಡುಗಡೆ!

3 comments
KMF

KMF Nandini Brand: ಕರ್ನಾಟಕ ಹಾಲು ಮಹಾಮಂಡಲವು ಪ್ರಸ್ತುತ ನಂದಿನಿ ಬ್ಯಾಂಡ್‌ನಡಿ ಹಾಲು, ತುಪ್ಪ, ಮೊಸರು, ಮಜ್ಜಿಗೆ, ಐಸ್ಕ್ರೀಂ, ಸಿಹಿ ಉತ್ಪನ್ನಗಳು, ಬೆಣ್ಣೆ, ಹಾಲಿನ ಪುಡಿ ಹೀಗೆ ಸುಮಾರು 156ಕ್ಕೂ ಹೆಚ್ಚು ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರುಕಟ್ಟೆಗೆ ಪೂರೈಸಲಾಗುತ್ತಿದೆ.

ಇದೀಗ ಕರ್ನಾಟಕ ಹಾಲು ಮಹಾಮಂಡಳವು (KMF Nandini Brand) ಹಾಲು ಹಾಗೂ ಹಾಲಿನ ಉತ್ಪನ್ನಗಳ ಉತ್ಪಾದನೆಯೊಂದಿಗೆ ಒಂದು ಹೆಜ್ಜೆ ಮುಂದೆ ಹೋಗಿ ಜನರ ಅವಶ್ಯಕತೆಗಳನ್ನು ಮನಗಂಡು ಮಾರುಕಟ್ಟೆಗೆ ನಂದಿನಿ ಬ್ಯಾಂಡ್‌ನಡಿ ‘ದೋಸೆ ಹಿಟ್ಟು’ ಪರಿಚಯಿಸಲು ಮುಂದಾಗಿದೆ.

ಹೌದು, ಹೆಚ್ಚಾಗಿ ನಗರದಲ್ಲಿ ರೆಡಿ ಟು ಕುಕ್ ವಸ್ತುಗಳನ್ನು ಆರಿಸಿಕೊಳ್ಳುತ್ತಾರೆ ಅದಕ್ಕಾಗಿ,ಕೆಎಂಎಫ್, ಮುಖ್ಯವಾಗಿ ಬೆಂಗಳೂರು ಮಹಾನಗರದ ಮಾರುಕಟ್ಟೆ ಗಮನದಲ್ಲಿಟ್ಟುಕೊಂಡು ದೋಸೆ ಹಿಟ್ಟು ಮಾರಾಟಕ್ಕೆ ಸಿದ್ಧತೆ ನಡೆಸಿದೆ. ಇದರಿಂದ ಜನರು ಸುಲಭವಾಗಿ ಮನೆಯಲ್ಲೇ ರುಚಿಕರ ದೋಸೆ ಸವಿಯುವ ಅವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

ಈ ದೋಸೆ ಹಿಟ್ಟಿನಿಂದ ಕಡಿಮೆ ಅವಧಿಯಲ್ಲಿ ಸುಲಭವಾಗಿ ದೋಸೆ ಮಾಡಲು ಪೂರಕವಾಗಿ ಕೆಎಂಎಫ್ ದೋಸೆ ಹಿಟ್ಟು ಉತ್ಪಾದಿಸಲಿದೆ. ಪ್ರಾಯೋಗಿಕವಾಗಿ ಒಂದು ಮತ್ತು ಎರಡು ಕೆ.ಜಿ. ಪ್ರಮಾಣದ ದೋಸೆ ಹಿಟ್ಟಿನ ಪ್ಯಾಕೆಟ್‌ಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಈಗಾಗಲೇ ನಂದಿನಿ ಬ್ಯಾಂಡ್ ದೋಸೆ ಹಿಟ್ಟು ಸಿದ್ದಪಡಿಸಲು ಟೆಂಡ‌ರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಸದ್ಯದಲ್ಲೇ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಈ ಮೂಲಕ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರನ್ನು ಸೆಳೆಯುವ ಗುರಿಯನ್ನು ಕೆಎಂಎಫ್ ಹೊಂದಿದೆ.

You may also like

Leave a Comment