Scholarship: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಕೊಡ ಮಾಡುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಸರ್ಕಾರ ವಿಸ್ತರಿಸಿದೆ.
ಹೌದು, ಕೋರ್ಸ್ಗಳ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿರುವ ಕಾರಣ ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ಬಂದ ಕಾರಣ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿಗಳು ಸಲ್ಲಿಕೆಯಾಗದ ಕಾರಣ 2023-24 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳ (ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.15 ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್ಲೈನ್ ವೆಬ್ಸೈಟ್ ವಿಳಾಸ https://ssp.postmatric.karnataka.gov.in/ ಗೆ ಭೇಟಿ ನೀಡಬಹುದು. ಇನ್ನು .ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.
