Home » Mangaluru: ಮಂಗಳೂರು ವಿವಿಯಲ್ಲಿ ವಿವಿಧ ವಿಭಾಗದ ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Mangaluru: ಮಂಗಳೂರು ವಿವಿಯಲ್ಲಿ ವಿವಿಧ ವಿಭಾಗದ ಪಿಎಚ್‌ಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

0 comments

Mangaluru: ಮಂಗಳೂರು ವಿವಿಯ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿವಿ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿಎಚ್.ಡಿ ಕಾರ್ಯಕ್ರಮಕ್ಕೆ ಲಭ್ಯವಿರುವ ಖಾಲಿ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಸಂಬಂಧಪಟ್ಟ ವಿಭಾಗಗಳು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕ್ಯಾಂಪಸ್‌ ಅಥವಾ ಹಂಪನಕಟ್ಟೆ ವಿವಿ ಕಾಲೇಜಿನಿಂದ 1,500 (ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದರೆ 750 ರು.) ಚಲನ್ ಅಥವಾ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣಕಾಸು ಅಧಿಕಾರಿ, ಮಂಗಳೂರು ವಿಶ್ವವಿದ್ಯಾನಿಲಯ ಇವರ ಹೆಸರಿನಲ್ಲಿ ಪಡೆದ ಡಿ.ಡಿ. ಮುಖಾಂತರ ಪಾವತಿಸಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗದ ಅಧ್ಯಕ್ಷರು/ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರದ ಮುಖ್ಯಸ್ಥರಿಗೆ ಆ.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ಮೂಲಕ ಪಡೆದುಕೊಳ್ಳಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

You may also like