Kodagu: 2025-26 ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು ಹಾಗೂ ಪಾಲಿಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ 02 ಬಾಲಕರ ಹಾಗೂ 02 ಬಾಲಕಿಯರ ವಿದ್ಯಾರ್ಥಿ ನಿಲಯಗಳು ಹಾಗೂ ಪೊನ್ನಂಪೇಟೆ ಪಟ್ಟಣ ಹಾಗೂ ಬಾಳೆಲೆಯಲ್ಲಿರುವ 02 ಬಾಲಕರ ಹಾಗೂ 01 ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಂದ ನಿಲಯಕ್ಕೆ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://swdhmis.karnataka.gov.in/ ಮೂಲಕ ಆಗಸ್ಟ್, 31 ರೊಳಗೆ ಅರ್ಜಿ ಸಲ್ಲಿಸಿ ನಂತರ ಆನ್‍ಲೈನ್ ಪ್ರತಿಯೊಂದಿಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಹಿಂದಿನ ವರ್ಷದ ಅಂಕಪಟ್ಟಿಯ ಜೆರಾಕ್ಸ್ ಪ್ರತಿಗಳನ್ನು ಸಂಬಂಧಿಸಿದ ನಿಲಯಗಳ ವಾರ್ಡನ್‍ರವರಿಗೆ ಸಲ್ಲಿಸುವಂತೆ ವಿರಾಜಪೇಟೆ ತಾಲ್ಲೂಕು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
